ರಾಜ್ಯದ ವಿವಿಧೆಡೆ ಅಕಾಲಿಕ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್ 19, 2023 (www.justkannada.in): ರಾಜ್ಯದ ರಾಮನಗರ, ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ಮಂಡ್ಯ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇಂದು ಕೂಡ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.

ಹೌದು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಸಿಡಿಲಿಗೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಸೋನಾಳ ಗ್ರಾಮದಲ್ಲಿ ಸಿಡಿಲಿಗೆ ಲಹು ಮಾಧವರಾವ ಬೀರ್ಗೆ (36) ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮೆದಕಿನಾಳ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಬಿದ್ದು ಭೀರಪ್ಪ ಶಿವರಾಜ (2) ಸಾವನ್ನಪ್ಪಿದ್ದಾನೆ.