ಉಪ್ಪಿ ನಟನೆಯ ‘ಹೋಮ್ ಮಿನಿಸ್ಟರ್’ ರಿಲೀಸ್ ಡೇಟ್ ಫಿಕ್ಸ್ !

ಬೆಂಗಳೂರು, ಮಾರ್ಚ್ 05, 2022 (www.justkannada.in): ಉಪ್ಪಿ ಜೊತೆ ವೇದಿಕಾ ನಾಯಕಿಯಾಗಿ ನಟಿಸಿರುವ ಹೋಮ್ ಮಿನಿಸ್ಟರ್ ಸಿನಿಮಾದ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಸೂಪರ್ ಸ್ಟಾರ್ ಉಪೇಂದ್ರ ಅವರು ಚಿತ್ರದ ರಿಲೀಸ್​ ದಿನಾಂಕ ಇರುವ ಪೋಸ್ಟರ್​ ಅನ್ನು ಅನಾವರಣಗೊಳಿಸಿದ್ದಾರೆ.

ಕರ್ನಾಟಕದಾದ್ಯಂತ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಹೋಮ್ ಮಿನಿಸ್ಟರ್’ ಸಿನಿಮಾ ತೆರೆಗೆ ಬರುತ್ತಿದೆ. ಸುಜಯ್ ಕೆ.ಶ್ರೀಹರಿ ನಿರ್ದೇಶನದ ಈ ಚಿತ್ರಕ್ಕೆ ಜಿಬ್ರಾನ್ ಸಂಗೀತ ನೀಡಿದ್ದಾರೆ.

ವೇದಿಕಾ ಜತೆಗೆ ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕಾ ಅವಿನಾಶ್, ತಿಲಕರು, ಲಾಸ್ಯಾ, ಸುಧಾ ಬೆಳವಾಡಿ, ಶ್ರೀನಿವಾಸ ಮೂರ್ತಿ ಇತರರು ನಟಿಸಿದ್ದಾರೆ.

ಹೋಮ್ ಮಿನಿಸ್ಟರ್ ಎಂಬ ಟೈಟಲ್ ಕೇಳಿ ಥಿಯೇಟರ್ ಒಳಗೆ ಹೋದರೆ ನೀವು ಶಾಕ್ ಆಗ್ತೀರಿ. ಅಲ್ಲಿ ಬೇರೆಯದೇ ಹೋಮ್ ಮಿನಿಸ್ಟರ್ ಇರುತ್ತಾರೆ. ಈ ಸಿನಿಮಾದಲ್ಲಿ ಅದೇ ಸಸ್ಪೆನ್ಸ್ ಎಂದು ಚಿತ್ರದ ಕುರಿತು ಉಪ್ಪಿ ಮಾಹಿತಿ ಹಂಚಿಕೊಂಡಿದ್ದಾರೆ.