ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್ಸಿ) 2025ನೇ ಸಾಲಿನ ಪರೀಕ್ಷಾ ಫಲಿತಾಂಶ ಇಂದು ಪ್ರಕಟಿಸಿದೆ.
ಆಲ್ ಇಂಡಿಯಾ ರ‍್ಯಾಂಕಿಂಗ್ ನಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಅವರು ದೇಶಕ್ಕೇ ನಂ.1 ಸ್ಥಾನ ಪಡೆದಿದ್ದಾರೆ. ಎಂ.ರಾಜೇಶ್ವರಿ ಸುವೆ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಯಾಂಕ ಪಡೆದಿದ್ದಾರೆ.ಇನ್ನೂ, 348 ಅಭ್ಯರ್ಥಿಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಇರಿಸಲಾಗಿದೆ.
ಕರ್ನಾಟಕದ ಕಿರಣ್ ಕಮಟೆ ಅವರು ರಾಜ್ಯಕ್ಕೆ ಮೊದಲ ಮತ್ತು ದೇಶಕ್ಕೆ 53ನೇ ರ‍್ಯಾಂಕ್ ಪಡೆದಿದ್ದಾರೆ. ರಾಜ್ಯದ 20 ಮಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಒಟ್ಟು 958 ಅಭ್ಯರ್ಥಿಗಳು ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರನ್ನು ವಿವಿಧ ಕೇಂದ್ರ ನಾಗರಿಕ ಸೇವೆಗಳಿಗೆ (IAS, IFS, IPS,) ನೇಮಕ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.
Key words: UPSC exam, results, announced







