Monday, August 3, 2026

BDA Apartments

Home Front Page ಸೆ.23 ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಮೇರಿಕಾ ಪ್ರವಾಸ.

ಸೆ.23 ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಮೇರಿಕಾ ಪ್ರವಾಸ.

ನವದೆಹಲಿ,ಸೆಪ್ಟಂಬರ್,14,2021(www.justkannada.in): ಕೊರೋನಾ ಹಿನ್ನೆಲೆ ಹಲವು ದಿನಗಳಿಂದ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಅಮೇರಿಕಾ ಪ್ರವಾಸಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು , ಸೆಪ್ಟಂಬರ್ 23 ರಿಂದ 25ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್​ 23-25ರವರೆಗೆ ಮೂರು ದಿನಗಳ ಕಾಲ ಯುಎಸ್​ ಪ್ರವಾಸ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 24ರಂದು ಅಮೆರಿಕ ಶ್ವೇತ ಭವನದಲ್ಲಿ ನಡೆಯಲಿರುವ ಕ್ವಾಡ್​ ನಾಯಕರ ಶೃಂಗಸಭೆ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

 ಅಮೆರಿಕದಲ್ಲಿ ಅಧ್ಯಕ್ಷರ ಬದಲಾವಣೆ ಆದ ಬಳಿಕ ಮೊದಲ ಬಾರಿಗೆ ಅಲ್ಲಿಗೆ ಪ್ರಧಾನಿ ಮೋದಿ  ತೆರಳುತ್ತಿದ್ದಾರೆ. ಈ ಮೂರು ದಿನಗಳ ಭೇಟಿ ವೇಳೆ ಅಮೆರಿಕದ ಹೊಸ ಅಧ್ಯಕ್ಷ ಜೋ ಬೈಡನ್ ಜತೆ ದ್ವಿಪಕ್ಷೀಯ ಮಾತುಕತೆಯನ್ನೂ ಪ್ರಧಾನಿ ಮೋದಿ ನಡೆಸಲಿದ್ದಾರೆ ಎನ್ನಲಾಗಿದೆ.

Key words: US -tour – Prime Minister- Narendra Modi – three days – September 23