ಚಾ.ನಗರದಲ್ಲಿ ವಿ.ಸೋಮಣ್ಣಗೆ ಹಿನ್ನೆಡೆ: ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುನ್ನಡೆ

ಬೆಂಗಳೂರು, ಮೇ 13, 2023 (www.justkannada.in): ವಿಧಾನ ಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆ ಮುನ್ನಡೆ ಸಾಧಿಸಿದ್ದರೆ,  ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಹಿನ್ನೆಡೆ ಅನುಭವಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಜಗದೀಶ್ ಶೆಟ್ಟರ್ ಗೆ ಹಿನ್ನೆಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕನಕಪುರದಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ 3 ಸಾವಿರ ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ. ಸಚಿವ ವಿ.ಸೋಮಣ್ಣಗೆ ಚಾಮರಾಜನಗರ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾಕೆ.ಸುಧಾಕರ್ ಹಿನ್ನೆಡೆ, ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಗೆ ಮುನ್ನಡೆ. ನರಗುಂದದಲ್ಲಿ ಸಿಸಿ ಪಾಟೀಲ್ ಗೆ ಹಿನ್ನಡೆ ಅನುಭವಿಸಿದ್ದಾರೆ. ಒಟ್ಟಾರೆ ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 70 ಕ್ಷೇತ್ರಗಳಲ್ಲಿ,  ಬಿಜೆಪಿ 66 ಕ್ಷೇತ್ರಗಳಲ್ಲಿ,  ಜೆಡಿಎಸ್ 19 ಕ್ಷೇತ್ರಗಳಲ್ಲಿ,  ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.