ಲಸಿಕೆ ಹಗರಣ; ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಮಧ್ಯಪ್ರವೇಶಕ್ಕೆ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು,ಮೇ,29,2021(www.justkannada.in):  ರಾಜ್ಯ ಸರ್ಕಾರ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ, ದುಬಾರಿ ಬೆಲೆಗೆ ಮಾರುತ್ತಿರುವ ಹಗರಣದ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.jk

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಮಾಧ್ಯಮಗಳ ಮಾತನಾಡಿದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು:

ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು ಗುರಿಯಾಗಿಸಿ ಟೀಕೆ ಮಾಡಿದ್ದರು. ಆದರೆ ಈ ಹಗರಣಕ್ಕೆ ಸಂಬಂಧಿಸಿದಂತೆ ಈಗ ಬಂಧನ ಆಗಿರುವವರು ಯಾರು? ಎಂಬುದನ್ನು ಅವರೇ ಹೇಳಬೇಕು.

ಇನ್ನು ಬೆಳಗ್ಗೆಯಿಂದ ಮಾಧ್ಯಮದಲ್ಲಿ ಬಂದಿರುವ ವರದಿ ಪ್ರಕಾರ, ಸರ್ಕಾರದಿಂದ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿ ಅದನ್ನು 900 ರಿಂದ 1200 ರುಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆಡಳಿತ ಪಕ್ಷದವರು ಶಾಮೀಲಾಗಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು. ಪ್ರಕರಣದ ಬಗ್ಗೆ ದೂರು ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ರಾಜ್ಯದ ಜನರ ಪರವಾಗಿ ಮನವಿ ಮಾಡುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮಕ್ಕಳ ಸುರಕ್ಷತೆಗೆ ಮಹಿಳಾ ಕಾಂಗ್ರೆಸ್ ನಿಂದ ಕಾರ್ಯಕ್ರಮ

ಮಹಿಳಾ ಕಾಂಗ್ರೆಸ್ ಮಕ್ಕಳ ಪರ ಮುಂಜಾಗ್ರತೆಯಿಂದ ಸರ್ಕಾರಕ್ಕೆ ಸಂದೇಶ ರವಾನಿಸುತ್ತಿದ್ದಾರೆ.  ನವೆಂಬರ್ 30 ರಂದು 2ನೇ ಅಲೆ ಬಗ್ಗೆ ಎಚ್ಚರಿಕೆ ಬಂದಿದ್ದರೂ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ. 3ನೇ ಅಲೆ ಮಕ್ಕಳಿಗೆ ಅಪಾಯ ತರುವ ಆತಂಕ ಇರುವ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ಮಕ್ಕಳ ರಕ್ಷಣೆ ಮಾಡಿಕೊಳ್ಳಬೇಕು ಎಂದು ಮಹಿಳಾ ಘಟಕ ಕಾರ್ಯಕ್ರಮ ರೂಪಿಸಿದೆ. ರಾಜ್ಯದ ಎಲ್ಲ ತಾಲೂಕುಗಳಲ್ಲೂ ಮಕ್ಕಳ ರಕ್ಷಣೆಗಾಗಿ ಮೆಡಿಕಲ್ ಕಿಟ್ ನೀಡುವ ಕೆಲಸ  ಮಾಡುತ್ತಿದ್ದಾರೆ. ನಾನು, ಶಾಸಕಾಂಗ ಪಕ್ಷದ ನಾಯಕರು, ಕಾರ್ಯಾಧ್ಯಕ್ಷರು ಈ ಪವಿತ್ರ ಕಾರ್ಯಕ್ರಮ ಬೆಂಬಲಿಸಲು ಇಲ್ಲಿಗೆ ಬಂದಿದ್ದೇವೆ ಎಂದರು.

ಎಲ್ಲ ಕ್ಷೇತ್ರಗಳಲ್ಲೂ ಕಾರ್ಯಕ್ರಮ:

ಪಕ್ಷದ ರಾಷ್ಟ್ರೀಯ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು 9 ದಿನಗಳ ಕಾಲ ನಿರಂತರವಾಗಿ ಈ ರಾಜ್ಯದಲ್ಲಿ ಪಕ್ಷದ ಪ್ರತಿಯೊಬ್ಬ ಶಾಸಕ, ಸಂಸದರು, ಮಾಜಿ ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಜತೆ ಚರ್ಚೆ ಮಾಡಿದರು.Government-removal-Inciting-Energy-Ramesh Zarakihioli-KPCC-President-D.K.Shivakumar

ಈ ವೇಳೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಕೊರೋನಾ ಪರಿಸ್ಥಿತಿ ನಿರ್ವಹಣೆಗೆ ಈ ರೀತಿ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲು ನಮ್ಮ ನಾಯಕರಿಗೆ ಸೂಚನೆ ಕೊಟ್ಟಿದ್ದೇವೆ. ಬೆಂಗಳೂರು ನಗರದಲ್ಲಿ ಶಾಸಕರಿರುವ ಕಡೆ ಉತ್ತಮ ಕೆಲಸ ನಡೆಯುತ್ತಿದ್ದು, ಶಾಸಕರು ಇಲ್ಲದ ಕಡೆಯಲ್ಲಿ ಅವರ ಬೆಂಬಲಕ್ಕೆ ನಿಲ್ಲಲು ವಿಧಾನ ಪರಿಷತ್ ಸದಸ್ಯರು, ಸಂಸದರಿಗೆ ಜವಾಬ್ದಾರಿ ನೀಡಲಾಗಿದೆ. ಅವರಿಂದ ಕೆಲಸ ಮಾಡಿಸುತ್ತಿದ್ದೇವೆ. ಈ ಬಗ್ಗೆ ವರದಿ ತರಿಸಿಕೊಳ್ಳಲು ಸಮಿತಿ ರಚಿಸಲಾಗಿದೆ. ನಮ್ಮ ಕಾರ್ಯಾಧ್ಯಕ್ಷರು ತಮ್ಮ ವಲಯಗಳಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಜನರ ಮಧ್ಯೆ ಇರುವುದು ನಮ್ಮ ಕರ್ತವ್ಯ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಚಾಮರಾಜನಗರ ಆಕ್ಸಿಜನ್ ಪ್ರಕರಣದಲ್ಲಿ ಮಾನ್ಯ ಹೈಕೋರ್ಟ್ ರಾಜ್ಯದ ಜನರಿಗೆ ನ್ಯಾಯ ಒದಗಿಸಿದೆ. ದೇಶದಲ್ಲಿ ನ್ಯಾಯ ಬದುಕಿದೆ ಅಂತಾ ನ್ಯಾಯಾಲಯ ಸಾಬೀತುಪಡಿಸಿದೆ.  ಈ ಸರ್ಕಾರಕ್ಕೆ ಕಿವಿ, ಕಣ್ಣು, ಹೃದಯವಿಲ್ಲ. ಇದು ಮಾನವೀಯತೆ ಇಲ್ಲದ ಸರ್ಕಾರ ಎಂದು ಟೀಕಿಸಿದರು.

Key words: Vaccine –scandal- High Court- Chief Justice- DK Sivakumar -appeals.