ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸೆಪ್ಟಂಬರ್ 19 ರಂದು 2024ನೇ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಮತ್ತು ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017ರಿಂದ 2023ನೇ ವರ್ಷದ ಪರಿಸರ ಮತ್ತು ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 11.30ಕ್ಕೆ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಹಾಗೂ ವಿಜಯಲಕ್ಷ್ಮಿ ಶಿಬರೂರು ಅವರಿಗೆ 2017ನೇ ವರ್ಷದ ಬಿಎಂ.ಟಿ ರಾಜೀವ್ ಅವರಿಗೆ 2018ನೇ ವರ್ಷದ ವಿನೋದ್ ಕುಮಾರ್ ಬಿ ನಾಯ್ಕ್ ಅವರಿಗೆ 2019ನೇ ವರ್ಷದ ಸುಧೀರ್ ಶೆಟ್ಟಿ ಅವರಿಗೆ 2021ನೇ ವರ್ಷದ ಮಲ್ಲಿಕಾರ್ಜುನ ಹೊಸಪಾಳ್ಯ ಅವರಿಗೆ 2022ನೇ ವರ್ಷದ ಹಾಗೂ ಮಂಜುನಾಥ್ ಅವರಿಗೆ 2023ನೇ ವರ್ಷದ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
ಪತ್ರಕರ್ತ ಜೀ.ಜ.ರಾಜೀವ್ ಅವರಿಗೆ 2017 ಸಾಲೀನ ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ , ದೇವಯ್ಯ ಗುತ್ತೇದರ್ ಅವರಿಗೆ 2018ರ ಗಿರೀಶ್ ಲಿಂಗಣ್ಣಅವರಿಗೆ 2019ನೇ ವರ್ಷದ ಯೋಗೇಶ್ ಎಂ.ಎನ್ ಅವರಿಗೆ 2020ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಪಿ.ಸಿ ಮೋಹನ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ , ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
Key words: Vadderse Raghuram Shetty, Award, on September 19