Wednesday, August 19, 2026

BDA Apartments

Home Front Page ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮೈಸೂರಿನ ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ: ಭಕ್ತಾದಿಗಳಿಂದ ವಿಶೇಷ ಪೂಜೆ…

ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮೈಸೂರಿನ ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ: ಭಕ್ತಾದಿಗಳಿಂದ ವಿಶೇಷ ಪೂಜೆ…

ಮೈಸೂರು,ಜ,6,2020(www.justkannada.in): ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ, ವೈಕುಂಠ ಏಕಾದಶಿ ಹಿನ್ನೆಲೆ ಮೈಸೂರಿನ ದೇವಸ್ಥಾಗಳಲ್ಲಿ ವಿವಿಧ ಪೂಜಾ. ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಮೈಸೂರಿನ ವೆಂಕಟೇಶ್ವರ ದೇವಾಲಯಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಟಿ.ನರಸೀಪುರದ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಶ್ರೀ ಗುಂಜನರಸಿಂಹ ಸ್ವಾಮಿ ವಿವಿಧ ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದು ಬ್ರಾಹ್ಮಿ ಮುಹೂರ್ತದಲ್ಲಿ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಪಡೆದರು.

ಇನ್ನು ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ  ವಿಷ್ಣು ಸಹಸ್ರ ನಾಮ ಚಾರಿಟಬಲ್ ಟ್ರಸ್ಟ್ ಸದಸ್ಯರಿಂದ ಲಡ್ಡು ವಿತರಣೆ ಮಾಡಲಾಗುತ್ತಿದ್ದು, ವಿಶೇಷ ಪೂಜೆ ಪುನಸ್ಕಾರದಿಂದ ದೇಗುಲದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ದೇವಾಲಯಕ್ಕೆ ಆಗಮಿಸಿರುವ ಭಕ್ತಾದಿಗಳು ನಾರಾಯಣನ  ಜಪ ಮಾಡುತ್ತಿದ್ದಾರೆ.

Key words: Vaikuntha Ekadashi- celebration -Mysore –temples-Special worship – devotees.