ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ನೋಟಿಸ್

ಬೆಂಗಳೂರು,ಜುಲೈ,5, 2024 (www.justkannada.in):  ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ವಿಶೇಷ ತನಿಖಾ ತಂಡ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಬಿ. ನಾಗೇಂದ್ರ ವಿಶೇಷ ತನಿಖಾ ತಂಡ ನೋಟಿಸ್ ನೀಡಿದೆ ಎನ್ನಲಾಗಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷ  ಬಸನಗೌಡ ದದ್ದಲ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ವಾಲ್ಮೀಕಿ ಅಭಿವೃದ್ದಿ ನಿಗಮ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮತ್ತು ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Key words: Valmiki Corporation, Scam, B. Nagendra, Notice