ಬೆಂಗಳೂರು, ಸೆಪ್ಟೆಂಬರ್, 10,2026 (www.justkannada.in): ವಂದೇ ಮಾತರಂ ಗೀತೆಯ ಗಾಯನ ಸಂಬಂಧ ಕೇಂದ್ರದ ನಿರ್ಧಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೆಡ್ಡು ಹೊಡೆದಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತಗೊಳಿಸಿ ಆದೇಶಿಸಿದೆ.
ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ 6 ಚರಣಗಳ ಬದಲು ಕೇವಲ ಎರಡೇ ಚರಣ ಹಾಡಲು ಸರ್ಕಾರ ಆದೇಶಿಸಿದೆ. ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಈ ಆದೇಶದಲ್ಲಿ ಈಕೆಳಕಂಡ ಅಂಶಗಳಿದೆ.
ಸಚಿವ ಸಂಪುಟದ ತೀರ್ಮಾನದಂತೆ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
Key words: State government, orders, limiting, ‘Vande Mataram, two stanzas.











