ಕೇಂದ್ರದಿಂದ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಧ ಪ್ರಶಸ್ತಿಗಳ ಘೊಷಣೆ…

ಬೆಂಗಳೂರು,ಏಪ್ರಿಲ್,24,2021(www.justkannada.in): ಪಂಚಾಯತ್ ರಾಜ್ ದಿವಸ್ ಆಚರಣೆಯ ಅಂಗವಾಗಿ ಇಂದು ಪ್ರಧಾನ ನರೇಂದ್ರಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ವರ್ಚುಯಲ್ ಸಭೆಯಲ್ಲಿ  ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಙಧ ಪ್ರಶಸ್ತಿಗಳನ್ನ ಘೋಷಣೆ ಮಾಡಲಾಗಿದೆ.jk

ಬೆಂಗಳೂರು ನಗರ ಜಿಲ್ಲೆಗೆ ಎರಡು ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯತ್ ಗೆ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪಂಚಾಯತ್ ರಾಜ್ ಸಶಕ್ತೀಕರಣ ಪ್ರಶಸ್ತಿ ಮತ್ತು ಬೆಂಗಳೂರು ಉತ್ತರ ತಾಲ್ಲೂಕಿನ ರಾಜಾನಕುಂಟೆ ಗ್ರಾಮ ಪಂಚಾಯತ್ ಗೆ, ಗ್ರಾಮಪಂಚಾಯತ್ ಅಭಿವೃದ್ಧಿ ಯೋಜನೆ (GPDP) ಸಿದ್ಧತೆ ಹಾಗೂ ಅನುಷ್ಠಾನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಹಾಗೆಯೇ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಲವಾರು ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಪ್ರಶಸ್ತಿಗೆ ಭಾಜನರಾದವರಿಗೆ ಮತ್ತು ಪ್ರಶಸ್ತಿ  ಲಭಿಸಲು ಶ್ರಮಿಸಿದ ಎಲ್ಲ ಹಿರಿಯ ಕಿರಿಯ ಅಧಿಕಾರಿ ವೃಂದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

Key words: Various -awards – Center – State Panchayat Raj –Department-thanked- minister KS Eshwarappa