ವಿವಿಧ ಬೇಡಿಕೆಗಳಿಗೆ ಆಗ್ರಹ:  ಇಂದು ಬೆಂಗಳೂರು ವಿವಿ ಬಂದ್.

ಬೆಂಗಳೂರು,ಜುಲೈ,11,2023(www.justkannada.in):  ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು   ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಿದ್ದು ಈ ಹಿನ್ನೆಲೆಯಲ್ಲಿ ವಿವಿ ಬಂದ್ ಆಗಲಿದೆ.

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಬಂದ್ ಗೆ ಕರೆ ನೀಡಿದ್ದು,  ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

Key words: various- demands-Bangalore University –bandh-today.