ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ : ಮೈಸೂರಿನಲ್ಲಿ ಒಳಚರಂಡಿ ಪೌರಕಾರ್ಮಿಕರಿಂದ ಪ್ರತಿಭಟನೆ…

ಮೈಸೂರು,ಡಿಸೆಂಬರ್,15,2020(www.justkannada.in): ಒಳಚರಂಡಿ ಕೆಲಸಗಾರರನ್ನು ಖಾಯಂ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಳಚರಂಡಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.I didn't knew CM BSY will think so cheaply - KPCC President D.K. Shivakumar

ಮೈಸೂರು ಮಹಾನಗರ ಪಾಲಿಕೆ ಮುಂಭಾಗ ಜಮಾಯಿಸಿದ ಒಳಚರಂಡಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಒಳಚರಂಡಿ ಕೆಲಸಗಾರರನ್ನು ಖಾಯಂ ಮಾಡಿಕೊಳ್ಳಬೇಕು. ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ನೀಡಬೇಕು.various-demands-fulfillment-protests-civil-worker-mysore

ಒಳಚರಂಡಿ ನೌಕರರ 231 ಜನರ ಹುದ್ದೆಗಳಿಗೆ ಕೇವಲ 50 ರಿಂದ 60 ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದೇವೆ. ಕೂಡಲೇ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಿ ಒಳಚರಂಡಿ ಪೌರಕರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಬೇಡಿಕೆ ಈಡೇರದಿದ್ದಲ್ಲಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

Key words: Various – demands –fulfillment-Protests –civil worker- Mysore