ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಬೂತ್ ಪರಿಶೀಲನೆಗೆ ಅಡ್ಡಿ.

ಮೈಸೂರು,ಮೇ,10,2023(www.justkannada.in):  ವರುಣಾ ಕ್ಷೇತ್ರದಲ್ಲಿ ಬಿಜೆಪಿ  ಅಭ್ಯರ್ಥಿ ವಿ.ಸೋಮಣ್ಣ ಅವರು ಬೂತ್ ಪರಿಶೀಲನೆಗೆ ಆಗಮಿಸಿದ ವೇಳೆ ಅಡ್ಡಿಪಡಿಸಿರುವ ಘಟನೆ ನಡೆದಿದೆ.

ವರುಣಾಕ್ಷೇತ್ರದಲ್ಲಿ ವಿ.ಸೋಮಣ್ಣ ಬೂತ್ ಪರಿಶೀಲನೆಗೆ ಮುಂದಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ  ವಾಗ್ವಾದ ನಡೆದಿದೆ. ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಜಟಾಪಟಿ ನಡುವೆ ವಿ.ಸೋಮಣ್ಣ ಬೂತ್ ಪರಿಶೀಲನೆ ನಡೆಸಿದರು.

Key words: Varuna- constituency- BJP candidate- V. Somanna – booth -verification.