Monday, September 21, 2026

BDA Apartments

ವರುಣಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್...
Home Front Page ವರುಣಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

ವರುಣಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

ಮೈಸೂರು,ಅಕ್ಟೋಬರ್,22,2024 (www.justkannada.in): ವರುಣಾ ಕ್ಷೇತ್ರದ ವಿವಿಧ ಇಲಾಖೆಗಳ 501.81 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ  ಸಿಎಂ ಸಿದ್ಧರಾಮಯ್ಯ ಶಂಕು ಸ್ಥಾಪನೆ ನೆರವೇರಿಸಿದರು.

ವರುಣಾ ಕ್ಷೇತ್ರದ ತಾಯೂರು ಸಮೀಪ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ  ಚಾಲನೆ ನೀಡಿದರು. ರಸ್ತೆ ಕಾಮಗಾರಿ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಸಮುದಾಯ ಭವನಗಳ ಕಾಮಗಾರಿಗೆ  ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಿ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನ ವಿತರಣೆ ಮಾಡಿದರು.ವರುಣಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್...

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್,  ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನ‌ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Varuna constituency, CM Siddaramaiah , development works