ಶಿವಮೊಗ್ಗದಲ್ಲಿ ವಿ.ಡಿ ಸಾವರ್ಕರ್ ಬ್ಯಾನರ್ ವಿಚಾರಕ್ಕೆ ಗಲಾಟೆ: ಪೊಲೀಸರಿಂದ ಲಾಠಿಚಾರ್ಜ್.

ಶಿವಮೊಗ್ಗ,ಆಗಸ್ಟ್,15,2022(www.justkannada.in):  ಇಂದು 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಹಾಕಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಡಿ ಸಾವರ್ಕರ್  ಬ್ಯಾನರ್ ಅನ್ನು ಕಿಡಿಗೇಡಿಗಳು ತೆರವುಗೊಳಿಸಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿ ಪೊಲೀಸರಿಂದ ಲಾಠಿಚಾರ್ಜ್ ನಡೆದಿದೆ.

ಶಿವಮೊಗ್ಗದ  ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ.  ಸ್ವಾತಂತ್ರ್ಯ ಹೋರಾಟಗಾರ ವಿ.ಡಿ ಸಾವರ್ಕರ್  ಅವರ ಭಾವಚಿತ್ರವನ್ನ ಕಿಡಿಗೇಡಿಗಳು ತೆರವುಗೊಳಿಸಿದ್ದು ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.  ಸ್ಥಳಕ್ಕೆ ಎಸ್ ಪಿ ಭೇಟಿ ನೀಡಿದ್ದು, ಶಿವಮೊಗ್ಗ ನಗರದಲ್ಲಿ ಇಂದು ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ

Key words:  VD Savarkar- banner – Riot – Shimoga- Lathi charge -police.