ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ;  ಡಿಸಿಎಂ ಸವದಿ ಮನವಿ

ಬೆಂಗಳೂರು,ನವೆಂಬರ್,16,2020(www.justkannada.in)  ; ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಸೇರಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವಂತಾಗಲು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕೆಂದು ಉಪ ಮುಖ್ಯಮಂತ್ರಿ,ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

kannada-journalist-media-fourth-estate-under-loss

ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವುದರಿಂದ ಸಾಮಾಜಿಕವಾಗಿ,  ಆರ್ಥಿಕವಾಗಿ  ಮತ್ತು  ಶೈಕ್ಷಣಿಕವಾಗಿ ಈ ಸಮುದಾಯದ ಬಡವರಿಗೆ ಮತ್ತು ಹಿಂದುಳಿದವರಿಗೆ ಅನುಕೂಲ ಸಿಗುವಂತಾಗಿ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಡಿಸಿಎಂ ಸವದಿ ತಿಳಿಸಿದ್ದಾರೆ.

ಸಚಿವರಾದ ವಿ.ಸೋಮಣ್ಣ, ಬಿ.ಸಿ.ಪಾಟೀಲ್, ಸೇಡಂ ಶಾಸಕರಾದ ರಾಜಶೇಖರ್ ಪಾಟೀಲ್ ತೆಲ್ಕೂರ್ ಮುಂತಾದವರು ಈ ಸಂದರ್ಭದಲ್ಲಿ ಸವದಿಯವರ ಜೊತೆಗಿದ್ದರು.

Veerashaiva,Lingayats,establishment,development,board,DCM Savadi,appeals

key words ; Veerashaiva-Lingayats-establishment-development-board-DCM Savadi-appeals