ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತು ಅತಿ ಶೀಘ್ರದಲ್ಲಿ ತೀರ್ಮಾನ- ಸಚಿವ ಸುರೇಶ್ ಕುಮಾರ್

ಬೆಂಗಳೂರು,ಜೂನ್,2,2021(www.justkannada.in): ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ‌ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.jk

ಈ‌ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ  ಸುರೇಶ್ ಕುಮಾರ್, ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಪೋಷಕ ವರ್ಗಗಳ‌‌ ಜೊತೆ ವ್ಯಾಪಕ ಸಮಾಲೋಚನಾ ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣ, ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ‌ ನಿರ್ಧಾರವನ್ನು ಬರುವ ಕೆಲವು ದಿನಗಳಲ್ಲಿ  ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಠಿಯಿಂದ ಈಗಾಗಲೇ ಕೇಂದ್ರ ಸರ್ಕಾರ ಸಿಬಿಎಸ್‍ಸಿ ಮತ್ತು ಐಸಿಎಸ್‍ ಸಿ 12ನೇ ತರಗತಿಯ ಮಕ್ಕಳ ಪರೀಕ್ಷೆಯನ್ನು ರದ್ದುಗೊಳಿಸಿದೆ.

Key words: Very -quick decision – SSLC – PUC exams-decision-Minister- Suresh Kumar