ಬಿಜೆಪಿ ಸೇರ್ಪಡೆ ಸುದ್ದಿಗೆ ತೆರೆ ಎಳೆದ  ಹಿರಿಯ ನಟ ಅನಂತ್ ನಾಗ್.

ಬೆಂಗಳೂರು,ಫೆಬ್ರವರಿ,23,2023(www.justkannada.in): ಹಿರಿಯ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ನಿನ್ನೆ ಸುದ್ದಿ ಹಬ್ಬಿತ್ತು. ಆದರೆ ಈ ಸುದ್ದಿಗೆ ಸ್ವತಃ ನಟ ಆನಂತ್ ನಾಗ್ ಅವರೇ ತೆರೆ ಎಳೆದಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ ಸ್ಪಷ್ಟನೆ ನೀಡಿರುವ ನಟ ಅನಂತ್ ನಾಗ್, ನಾನು ಯಾವುದೇ ರಾಜಕೀಯ ಪಕ್ಷ ಸೇರಲ್ಲ, ಬಿಜೆಪಿಯನ್ನೂ ಸೇರಲ್ಲ, ಯಾವುದೇ ಪಕ್ಷಕ್ಕೆ ಹೋಗಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರಲು ಆಸಕ್ತಿ ಇಲ್ಲ ಎಂದಿದ್ದಾರೆ.

ನಿನ್ನೆ ಸಂಜೆ  ಅನಂತ್ ನಾಗ್ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿತ್ತು. ನಂತರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂದು ವರದಿಯಾಗಿತ್ತು. ಇದೀಗ ಇದೆಲ್ಲದಕ್ಕೂ ಅನಂತ್ ನಾಗ್ ಅವರೇ ತೆರೆ ಎಳೆದಿದ್ದಾರೆ.

Key words: Veteran actor -Ananth Nag –clearify- news -joining -BJP.