ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ಕೊರೊನಾಗೆ ಬಲಿ

ಬೆಂಗಳೂರು, ಸೆಪ್ಟೆಂಬರ್ 24, 2020 (www.justkannada.in): ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೋವಿಡ್-19 ನಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ವೇಣುಗೋಪಾಲ್ ಪಶ್ಚಿಮ ಗೋದಾವರಿಯ ನರಸಾಪುರದವರು. ಚಿತ್ರರಂಗಕ್ಕೆ ಕಾಲಿಡುವ ಮೊದಲು ಭಾರತದ ಆಹಾರ ನಿಗಮದಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು.

ಮರ್ಯಾದ ರಾಮಣ್ಣ’, ‘ಚಲೋ’, ‘ಪಿಲ್ಲಾ ಜಮೀನ್ದಾದ್’, ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ.