ಪಶು ವೈದ್ಯೆ ಮೇಲೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ : ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದೆ…

ನವದೆಹಲಿ,ಡಿ,6,2019(www.justkannada.in): ಪಶುವೈದ್ಯೆ  ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನ ಎನ್ ಕೌಂಟರ್ ಮಾಡಿದ್ದ ಪೊಲೀಸರ ಕಾರ್ಯಕ್ಕೆ ರಾಜಕೀಯ ವ್ಯಕ್ತಿಗಳು ಸಿನಿಮಾ ನಟರು ಸೇರಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಎನ್ ಕೌಂಟರ್ ಮಾಡಿದ ಪೊಲೀಸರಿಗೆ ಹೂಮಳೆ ಸುರಿಸಿ ಜನರು ಕೃತಜ್ಞತೆ ಸಲ್ಲಿಸಿದ್ದು ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

ಆದರೆ ಆರೋಪಿಗಳನ್ನ ಪೊಲೀಸರು ಎನ್ ಕೌಂಟರ್ ಮಾಡಿರುವುದಕ್ಕೆ ಬಿಜೆಪಿ ಸಂಸದೆ ಮೇನಕಾ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡಿರುವ ಅವರು, ಈ ಘಟನೆಯು ಒಂದು ಅಪಾಯಕಾರಿ ನಿದರ್ಶನವಾಗಿದೆ. ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.

ಆರೋಪಿಗಳಿಗೆ ಕೋರ್ಟ್ ಮೂಲಕ ಶಿಕ್ಷೆಯಾಗಿ ಗಲ್ಲಿಗೇರಿಸಬೇಕಿತ್ತು. ಆದರೆ ಕಾನೂನು ಕೈಗೆತ್ತುಕೊಳ್ಳುವುದು ಸರಿ ಅಲ್ಲ. ಇಂತಹ ಬೆಳವಣಿಗೆಗಳು ತೀವ್ರ ಅಪಾಯಕಾರಿ ಎಂದು ಮೇನಕಾ ಗಾಂಧಿ ತಿಳಿಸಿದ್ದಾರೆ.

Key words: veterinarian doctor-rape- accused- En counter- Oppose- BJP MP