Saturday, October 10, 2026

BDA Apartments

ಬಿ.ನಾಗೇಂದ್ರ ರಾಜೀನಾಮೆ ವೇಳೆ BDA JK_Adv BDA Adv
Home Front Page ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸುತ್ತಿರುವ ಸಿಐಡಿಯು  329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಜಾರಿ ನಿರ್ದೇಶನಾಲಯದ (ED) ವಿಚಾರಣೆ ವೇಳೆ ಕೆಲ ಅಭ್ಯರ್ಥಿಗಳು ಅಕ್ರಮ ಎಸಗಿರುವುದಾಗಿ ತಪ್ಪೊಪ್ಪಿಗೆ ನೀಡಿದ ಬೆನ್ನಲ್ಲೇ,  ಸಿಐಡಿ ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದ್ದು ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ನೋಟಿಸ್ ಸ್ವೀಕರಿಸಿರುವ ಎಲ್ಲಾ 329 ಅಭ್ಯರ್ಥಿಗಳು ಯಾವುದೇ ನೆಪ ಹೇಳದೆ ಇಂದೇ ಖುದ್ದಾಗಿ ಸಿಐಡಿ ಕಚೇರಿಯ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಪಶು ವೈದ್ಯಾಧಿಕಾರಿಗಳ ನೇಮಕಾತಿ jk02_new jk02 new

Key words: Veterinary officer, recruitment, scam, CID, notices , 329 candidates