Monday, September 21, 2026

BDA Apartments

ಇಂದಿನಿಂದ ನಾಲ್ಕು ದಿನ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರ್ನಾಟಕ ಪ್ರವಾಸ BDA ...
Home Front Page ಇಂದಿನಿಂದ ನಾಲ್ಕು ದಿನ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರ್ನಾಟಕ ಪ್ರವಾಸ

ಇಂದಿನಿಂದ ನಾಲ್ಕು ದಿನ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರ್ನಾಟಕ ಪ್ರವಾಸ

ಬೆಂಗಳೂರು, ನವೆಂಬರ್ 14, 2021 (www.justkannada.in): ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ನಾಲ್ಕು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಎಚ್‍ಎಎಲ್ ಏರ್ಪೋರ್ಟ್‍ಗೆ ಆಗಮಿಸಲಿರುವ ಅವರು, ನಾಳೆ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಯಾಗಲಿದ್ದಾರೆ.

ಬೆಂಗಳೂರು ಟೆಕ್ ಸಮ್ಮಿಟ್-2021 ಕಾರ್ಯಕ್ರಮವನ್ನೂ ವೆಂಕಯ್ಯ ನಾಯ್ಡು ಉದ್ಘಾಟಿಸಲಿದ್ದಾರೆ. ಬುಧವಾರ ನಡೆಯಲಿರುವ ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ 24ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಉದ್ಘಾಟಿಸಲಿದ್ದಾರೆ.

ಬೆಂಗಳೂರು ಟೆಕ್ ಸಮ್ಮಿಟ್ 2021 ಕಾರ್ಯಕ್ರಮದಲ್ಲಿ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ದಾವೋಸ್ ನಲ್ಲಿರುವ ವಿಶ್ವ ಆರ್ಥಿಕ ವೇದಿಕೆಯ ಮುಖ್ಯಸ್ಥರು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ.