Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ‘ವಿಚಾರವಾದ’: ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ಆಕ್ರೋಶ

‘ವಿಚಾರವಾದ’: ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ಆಕ್ರೋಶ

ಬೆಂಗಳೂರು, ಮೇ 21, 2023 (www.justkannada.in): ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರು ಇದೀಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ.

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದಕ್ಕೆ ಚೇತನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಕೆಂದರೆ ಕಳೆದ ಬಾರಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಇದೀಗ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಚೇತನ್, ‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದು ಟ್ವೀಟ್ ಮಾಡಿದ್ದಾರೆ.