ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆಗೆ ದಿನಾಂಕ ಫಿಕ್ಸ್…

ಬೆಂಗಳೂರು,ಜು,15,2019(www.justkannada.in):  ಸಂಕಷ್ಟದಲ್ಲಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇದೀಗ ಮತ್ತೊಂದು ಅವಕಾಶ ಸಿಕ್ಕಿದೆ. ಹೌದು,  ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆಗೆ ದಿನಾಂಕ ನಿಗದಿಯಾಗಿದೆ.

ಗುರುವಾರ ಬೆಳಿಗ್ಗೆ 11 ಗಂಟೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡಲು ಇಂದು ವಿಧಾನಸೌಧದಲ್ಲಿ  ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ಡಿಸಿಎಂ ಪರಮೇಶ್ವರ್ ಪಾಲ್ಗೊಂಡಿದ್ದರು.

ಸಭೆಯಲ್ಲಿ ಗುರುವಾರ ಬಹುಮತ ಸಾಭೀತಿಗೆ ಸಮಯ ನಿಗದಿ ಮಾಡಿದ್ದು, ಅಷ್ಟರಲ್ಲಿ ದೋಸ್ತಿ ಪಕ್ಷಗಳು ಅತೃಪ್ತ ಶಾಸಕರನ್ನ ಮನವೊಲಿಸಿ ಸರ್ಕಾರ ಉಳಿಸಿಕೊಳ್ಳಲು ತೀವ್ರ ಕಸರತ್ತು ಮಾಡಬೇಕಿದೆ. ಈ ನಡುವೆ ಗುರುವಾರದವರೆಗೆ ಸದನ ನಡೆಸದಂತೆ ಬಿ.ಎಸ್ ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ.  ಇನ್ನು ನಾಳೆ ಸುಪ್ರೀಂಕೋರ್ಟ್ ನಲ್ಲಿ ಅತೃಪ್ತ ಶಾಸಕರ ಅರ್ಜಿ ವಿಚಾರಣೆ ನಡೆಯಲಿದ್ದು ಏನು ತೀರ್ಪು ಬರಲಿದೆ ಎಂಬುದನ್ನ ಕಾದು ನೋಡಬೇಕು.

Key words: vidhan soudha-fixes- date -confidence vote- CM HD Kumaraswamy