ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಧಾನಸೌಧ ಚಲೋ: ಪ್ರತಿಭಟನಾನಿರತ ರೈತರು ವಶಕ್ಕೆ.

ಬೆಂಗಳೂರು,ಸೆಪ್ಟಂಬರ್,26,2022(www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಧಾನಸೌಧ ಚಲೋಗೆ ಮುಂದಾದ ಪ್ರತಿಭಟನಾನಿರತ ರೈತರನ್ನ ಪೊಲೀಸರು ವಶಕ್ಕೆ ಪಡೆದರು.

ಕಬ್ಬಿಗೆ ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ  ಕೆಎಸ್ ಆರ್ ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಚಲೋ ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸರು ರೈಲ್ವೆ ನಿಲ್ದಾಣದ ಬಳಿಯೇ ಪ್ರತಿಭಟನಾನಿರತ ರೈತರನ್ನ ತಡೆದರು.

ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿ ಹಲವರನ್ನ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ  ಪೊಲೀಸರು ರೈತರ ನಡುವೆ ಮಾತಿನ ಚಕಮಕಿ ನಡೆಯಿತು.

Key words: Vidhana Soudha -Chalo  – various –demands- Protest- farmers