ಮಹಾನಾಯಕ ಧಾರವಾಹಿ ವೀಕ್ಷಿಸಿ ಅಂಬೇಡ್ಕರ್ ಅವರ ಆದರ್ಶ ಮೈಗೂಡಿಸಿಕೊಳ್ಳಿ : ಪ್ರೊ.ಜಿ.ಹೇಮಂತ್ ಕುಮಾರ್

ಮೈಸೂರು, ಸೆಪ್ಟೆಂಬರ್, 19,2020(www.justkannada.in) : ಎಲ್ಲ ವರ್ಗದ ಜನರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಕುರಿತು ಪ್ರಸಾರವಾಗುತ್ತಿರುವ ಮಹಾನಾಯಕ ಧಾರವಾಹಿ ವೀಕ್ಷಣೆ ಮಾಡುವ ಮೂಲಕ ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.

jk-logo-justkannada-logo

ಮೈಸೂರು ವಿವಿ ಮಾನಸಗಂಗೋತ್ರಿಯ ಆವರಣದಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರ ಆದರ್ಶಗಳನ್ನು ವಿದ್ಯಾವಂತರು ಮಾತ್ರವಲ್ಲದೇ, ಜನಸಾಮಾನ್ಯರು ತಿಳಿಯುವುದಕ್ಕೆ ಮಹಾನಾಯಕ ಧಾರವಾಹಿ ಪೂರಕವಾಗಿದ್ದು, ಈ ಧಾರವಾಹಿಯ ನೋಡುವ ಮೂಲಕ ಅಂಬೇಡ್ಕರ್ ಅವರ ಆದರ್ಶ, ಸಾಧನೆಯನ್ನು ತಿಳಿಯಬೇಕು ಎಂದು ಸಲಹೆ ನೀಡಿದರು.

View,great,serial,Ambedkar,Incorporate,their ideal,Prof.G.Hemant Kumar

ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡಿರುವುದು ಸಂತೋಷ ಎಂದು ಮೆಚ್ಚುಗೆವ್ಯಕ್ತಪಡಿಸಿದರು.

ಈ ಸಂದರ್ಭ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರ ಗುರು, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಂ, ಸಿಂಡಿಕೇಟ್ ಸದಸ್ಯ ಇ.ಸಿ ನಿಂಗರಾಜೇಗೌಡ, ದಲಿತ ಒಕ್ಕೂಟದ ಅಧ್ಯಕ್ಷ ಸಂದೇಶ ಮನುಗಳ್ಳಿ, ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ, ಸಂಪರ್ಕಾಧಿಕಾರಿ ನವೀನ್ ಮೌರ್ಯ ಇತರರು ಇದ್ದರು.

key words : View-great-serial-Ambedkar-Incorporate-their ideal-Prof.G.Hemant Kumar