ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ

ಚೆನ್ನೈ,ಮೇ,7,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ.  ಆದರೆ ಇಂದು ನಡೆಯಬೇಕಿದ್ದ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ತಮಿಳುನಾಡಿನ ರಾಜ್ಯಪಾಲರ ಬಳಿ ನಿನ್ನೆ ವಿಜಯ್ ಸರ್ಕಾರದ ರಚನೆಗೆ ಹಕ್ಕು ಮಂಡಿಸಿದ್ದರು. ಆದರೆ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ತಿಳಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಇಂದು ನಿಗದಿಯಾಗಿದ್ದ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಹೊಂದಿದೆ. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬೇಕಾಗಿದ್ದರಿಂದ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಇದುವರೆಗೂ ಕಾಂಗ್ರೆಸ್ ಮಾತ್ರ ಟಿವಿಕೆಗೆ ಬಹಿರಂಗವಾಗಿ ಬೆಂಬಲ ಘೋಷಿಸಿದೆ.

Key words: Vijay,  swearing,  Tamil Nadu, CM, postponed