ಬೆಂಗಳೂರು,ಜನವರಿ,2,2026 (www.justkannada.in): ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ವಿಜಯಲಕ್ಷಿ ಅವರ ದೂರು ವಿಚಾರ ಸಂಬಂಧ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಬಗ್ಗೆ ಡಿಸೆಂಬರ್ 24 ರಂದು ಕೇಸ್ ದಾಖಲಾಗಿತ್ತು. ಚಿಕ್ಕಬಾಣಾವರದ ಓರ್ವ, ದಾವಣಗೆರೆಯ ಓರ್ವನ ಬಂಧನವಾಗಿದೆ.
ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶ ರವಾನೆ ಮಾಡಿದರೆ ಕಿರುಕುಳ ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
Key words: Vijayalakshmi, complaint, Two accused, arrested







