ವಿಜಯಪುರ ವಿಮಾನ ನಿಲ್ದಾಣ ಆದಷ್ಟು ಬೇಗ ಲೋಕಾರ್ಪಣೆ: ಶೀಘ್ರದಲ್ಲೇ ನೀರಾವರಿ ಯೋಜನೆ ಪೂರ್ಣ-ಸಚಿವ ಎಂಬಿ ಪಾಟೀಲ್​.

ವಿಜಯಪುರ,ಆಗಸ್ಟ್,15,2023(www.justkannada.in): ವಿಜಯಪುರ ಜಿಲ್ಲೆಯಲ್ಲಿನ ವಿಮಾನ ನಿಲ್ದಾಣ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದೆ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ನಾಡಿನ‌ ಜನತೆಗೆ 77ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಅನೇಕ ಮಹನಿಯರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೂ ನಮನ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ ಐದು ಗ್ಯಾರೆಂಟಿಗಳಲ್ಲಿ ನಾಲ್ಕು ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಜಾರಿಗೆ ಬಂದಿವೆ. ಕೇಂದ್ರ ಸರ್ಕಾರದ ಅಸಹಕಾರ ನೀತಿಯಿಂದ 10 ಕೆಜಿ ಅಕ್ಕಿ ಕೊಡಲು ಆಗುತ್ತಿಲ್ಲ ಹೀಗಾಗಿ 5ಕೆಜಿ ಅಕ್ಕಿಯ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿದೆ.  ಇದಕ್ಕಾಗಿ ವಿಜಯಪುರ ಜಿಲ್ಲೆಯಲ್ಲೇ 20ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದರು.

Key words: Vijayapur airport – inaugurated – soon-Minister- MB Patil