Wednesday, October 7, 2026

BDA Apartments

immense respect BDA JK_Adv BDA Adv
Home Front Page ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ- ಶಾಸಕ ಜಿ.ಟಿ ದೇವೇಗೌಡ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ- ಶಾಸಕ ಜಿ.ಟಿ ದೇವೇಗೌಡ.

ಮೈಸೂರು,ನವೆಂಬರ್,11,2023(www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ್ದು ಒಳ್ಳೆಯ ಬೆಳವಣಿಗೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ನುಡಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡರು, ಬಿಎಸ್ ಯಡಿಯೂರಪ್ಪ ಸಿಎಂ ಆದ ಮೇಲೆ ವೀರಶೈವ ಮಾತ್ರವಲ್ಲ, ಎಲ್ಲಾ ಸಮುದಾಯದವರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗಿದ್ದಾರೆ.  ಬಿಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ ಕುಮಾರಸ್ವಾಮಿ ಒಟ್ಟಾಗಿ ಹೋದ ಕಾರಣಕ್ಕಾಗಿಯೇ ಅಧಿಕಾರ ಸಿಕ್ಕಿದ್ದು. ಇಬ್ಬರೂ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಈಗ ಅದೇ ರೀತಿ BSY ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಾಗಿದೆ. ಮತ್ತೊಂದು ಕಡೆ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತದೆ ಎಂದು ಹೇಳಿದರು.ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ- ಶಾಸಕ ಜಿ....

ಬಿ.ವೈ.ವಿಜಯೇಂದ್ರರಿಗೆ ಸಮುದಾಯದ ಬೆಂಬಲ ಇದೆ. ಯಡಿಯೂರಪ್ಪ ಸಿಎಂ ಆಗಲು ವಿಜಯೇಂದ್ರ ಚಾಣಾಕ್ಷತನವೂ ಇದೆ.  ಬಿಎಸ್ ಯಡಿಯೂರಪ್ಪ ಮೂಲೆ ಗುಂಪು ಎನ್ನುವ ಕಾರಣಕ್ಕೆ ಬಿಜೆಪಿಗೆ ಹಿನ್ನಡೆಯಾಗಿತ್ತು. ಆದ್ದರಿಂದ ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಸೂಕ್ತವಾಗಿದೆ ಎಂದು ಜಿ.ಟಿ ದೇವೇಗೌಡರು ತಿಳಿಸಿದರು.

Key words: Vijayendra- BJP state president – good development-MLA- GT Deve Gowda