Saturday, September 26, 2026

BDA Apartments

ಮೈದುಂಬಿದ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ BDA JK_Adv BDA Adv
Home Front Page ಮೈದುಂಬಿದ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಮೈದುಂಬಿದ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ವಿಜಯಪುರ,ಆಗಸ್ಟ್,21,2021(www.justkannada.in):  ಮೈದುಂಬಿ ನಿಂತ ಕೃಷ್ಣೆಯ ಜಲನಿಧಿಗೆ, ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಾಗೀನ ಅರ್ಪಿಸಿದರು.

ಸಂಪೂರ್ಣ ಭರ್ತಿಯಾದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ. ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ಈ ಭಾಗದ ಜನರ ಜೀವನವನ್ನು ಸಮೃದ್ಧಿಗೊಳಿಸಲಿ ಎಂದು ಹಾರೈಸಿದರು.

ಈ ಸಂದರ್ಭ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಎ.ಎಸ್. ಪಾಟೀಲ ನಡಹಳ್ಳಿ, ಸಚಿವ ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಿ.ಸಿ. ಪಾಟೀಲ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಸಿದ್ದು ಸವದಿ ಇದ್ದರು.

Key words: vijaypur-krishna-river-full-bagina-CM-Basavaraja bommai