Sunday, September 13, 2026

BDA Apartments

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ BDA JK_A...
Home Crime ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಗೆ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿರುವ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಅಪರಾಧಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಮೇಲ್ಮನವಿ ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ high court

ಇತ್ತೀಚೆಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಆರೋಪಿಗಳನ್ನ ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

Key words: Vinay Kulkarni,  High Court, challenging, life sentence