ಬೆಂಗಳೂರು,ಮೇ,7,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿಕೆ ಮಾಡಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ನಂತರ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ತಡೆ, ಜಾಮೀನು ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ಈ ಮೇಲ್ಮನವಿ ವಿಚಾರಣೆ ನಡೆಯಿತು. ಆಕ್ಷೇಪಣೆ ಸಲ್ಲಿಸಲು ಸಿಬಿಐ ವಕೀಲರು ಕಾಲಾವಕಾಶ ಕೋರಿದರು. ಬಳಿಕ ಹೈಕೋರ್ಟ್ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿಕೆ ಮಾಡಿದೆ. ಹಾಗೆಯೇ ಚನ್ನಕೇಶವ ಟಿಂಗರಿಕರ್ ಜಾಮೀನು ಅರ್ಜಿ ವಿಚಾರಣೆಯೂ ಮೇ 14ಕ್ಕೆ ಮುಂದೂಡಿಕೆಯಾಗಿದೆ.
Key words: Vinaya Kulkarni, life imprisonment , High court







