Saturday, August 15, 2026

BDA Apartments

Home Crime ಲಖಿಂಪುರ್ ಖೇರಿಯಲ್ಲಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಪೊಲೀಸರ ವಶಕ್ಕೆ.

ಲಖಿಂಪುರ್ ಖೇರಿಯಲ್ಲಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಪೊಲೀಸರ ವಶಕ್ಕೆ.

ಉತ್ತರ ಪ್ರದೇಶ,ಅಕ್ಟೋಬರ್,9,2021(www.justkannada.in): ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಧರಣಿನಿರತ ರೈತರ ಮೇಲೆ ಕಾರು ಹರಿಸಿ ಹತ್ಯೆ ಆರೋಪಕ್ಕೆ ಆಶಿಶ್ ಮಿಶ್ರಾ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ  ಧರಣಿನಿರತ ರೈತರ ಮೇಲೆ ಎರಡು ಕಾರುಗಳು ಹರಿದು ನಾಲ್ವರು ರೈತರು ಸಾವನ್ನಪ್ಪಿದ್ದರು.

ಕಾರಿನಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಅಶಿಶ್ ಮಿಶ್ರಾ ಕೂಡ ಇದ್ದರು ಎಂ ಆರೋಪ ಕೇಳಿ ಬಂದಿತ್ತು.  ಈ ಘಟನೆ ನಡೆದು ವಾರಗಳೇ ಕಳೆದರೂ ಆಶಿಶ್ ಮಿಶ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದ ಪೊಲೀಸರು ಇಂದು 6 ಗಂಟೆಗಳ ಕಾಲ  ಆಶಿಶ್ ಮಿಶ್ರಾ ಅವರ ವಿಚಾರಣೆ ನಡೆಸಿದ್ದು ಬಳಿಕ ಆಶಿಶ್ ಮಿಶ್ರಾ ಅವರನ್ನ ಬಂಧಿಸಿದ್ದಾರೆ ಎನ್ನಲಾಗಿದೆ.

Key words: Violence case -Lakhimpur Kheri- Union minister -Ajay Mishra’s- son -arrested – police