ಶ್ರೀಲಂಕಾದಲ್ಲಿ ಭುಗಿಲೆದ್ಧ ಹಿಂಸಾಚಾರ: ಅಧ್ಯಕ್ಷರ ನಿವಾಸಕ್ಕೆ ಸಾವಿರಾರು ಜನರಿಂದ ಮುತ್ತಿಗೆ ಹಾಕಿ ಆಕ್ರೋಶ.

 

ಕೊಲಂಬೋ,ಜುಲೈ9,2022(www.justkannada.in): ಪಕ್ಕದ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು,  ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಬಗೆಹರಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿರುವ  ಜನರು  ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ನಿವಾಸದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಷೆ ರಾಜೀನಾಮೆಗೆ ಒತ್ತಾಯಿಸಿ ಜನರು  ರಾಷ್ಟ್ರಪತಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ನಿವಾಸದೊಳಗೆ ನುಗ್ಗಿದ ಪ್ರತಿಭಟನಾಕಾರರು ರಾಷ್ಟ್ರಪತಿ ಭವನವದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಒಡೆದುಹಾಕುವ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ.

ಅಲ್ಲದೇ ಒಳಗೆ ನುಗ್ಗಿರುವ ಪ್ರತಿಭಟನಾಕಾರರು ರಾಷ್ಟ್ರಪತಿ ನಿವಾಸದಲ್ಲಿರುವ ಈಜುಕೊಳದಲ್ಲಿ ಈಜುವ ಮೂಲಕ ಮಸ್ತಿ ಮಾಡುತ್ತಿರುವ ವಿಡಿಯೋ ​ ವೈರಲ್​ ಆಗಿದೆ. ಜನರ ಆಕ್ರೋಶಕ್ಕೆ ಬೆದರಿದ ಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಷೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇನ್ನು ಮಾಜಿ ಸಚಿವ ರಜಿತಾ ಸೇನಾರತ್ನೆ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದಾರೆ. ಅಧ್ಯಕ್ಷರ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿರುವ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.

Key words:violence – Sri Lanka-president- residence – thousands -people – outrage