ಮುಂಬೈ,ಮೇ,12,2025 (www.justkannada.in): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಿಟ್ ಮ್ಯಾನ್ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೆ ಇದೀಗ ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಸಹ ಗುಡ್ ಬೈ ಹೇಳಿದ್ದಾರೆ.
ಇತ್ತೀಚೆಗೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದರು. ಇದೀಗ ವಿರಾಟ್ ಕೊಹ್ಲಿ ಸಹ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತುಂಬು ಹೃದಯದಿಂದ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ.
2011 ಜೂನ್ 20 ರಂದು ಮೊದಲ ಟೆಸ್ಟ್ ಪಂದ್ಯವಾಡಿದ್ದ ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳಲ್ಲಿ 30 ಶತಕ, 31 ಅರ್ಧ ಶತಕ ಬಾರಿಸುವ ಮೂಲಕ 9230 ರನ್ ಗಳಿಸಿದ್ದರು. ಕೊನೆಯದಾಗಿ 2025 ಜನವರಿ 3 ರಂದು ಕೊನೆಯ ಟೆಸ್ಟ್ ಪಂದ್ಯವಾಡಿದ್ದರು.
2024 ಜೂನ್ 29 ರಂದು ಅಂತರಾಷ್ಟ್ರೀಯ ಟಿ-20 ಪಂದ್ಯಾವಳಿಗೆ ನಿವೃತ್ತಿ ಘೋಷಣೆ ಮಾಡಿದ್ದರು. ಚೇಸಿಂಗ್ ಮಾಸ್ಟರ್ , ಕಿಂಗ್ ಕೊಹ್ಲಿ ಎಂದೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ವಿರಾಟ್ ಇದೀಗ ಟೆಸ್ಟ್ ಗೂ ವಿದಾಯ ಹೇಳಿದ್ದು ಏಕದಿನ ಪಂದ್ಯಗಳಲ್ಲಿ ಮಾತ್ರ ಮುಂದುವರೆಯಲಿದ್ದಾರೆ.
Key words: Chasing master, Virat Kohli, Retirement, Test cricket