ತೆರೆ ಮೇಲೆ ಮತ್ತೆ ಇಂದು ವಿಷ್ಣು ದಾದಾ ಅಬ್ಬರ ! ಡಿಜಿಟಲ್ ‘ನಿಷ್ಕರ್ಷ’ ರಿ ರಿಲೀಸ್

ಬೆಂಗಳೂರು, ಸೆಪ್ಟೆಂಬರ್ 20, 2019 (www.justkannada.in):  ವಿಷ್ಣುವರ್ಧನ್ ನಟಿಸಿದ್ದ ನಿಷ್ಕರ್ಷ ಚಿತ್ರ ಇಂದು ಡಿಜಿಟಲ್ ರೂಪದಲ್ಲಿ ಮರು ಬಿಡುಗಡೆಯಾಗುತ್ತಿದೆ.

ಸೆಪ್ಟೆಂಬರ್ 18 ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ದಿನವಾಗಿದ್ದು, ಅದೇ ಸಂದರ್ಭದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

ಸದ್ಯಕ್ಕೆ ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವುದು ಥ್ರಿಲ್ಲರ್ ಸಿನಿಮಾಗಳು. 93ರಲ್ಲೇ ಅಂಥಾದ್ದೊಂದು ಅದ್ಭುತ ಥ್ರಿಲ್ಲರ್ ಸಿನಿಮಾ ಕೊಟ್ಟಿದ್ದರು ಸುನೀಲ್ ಕುಮಾರ್ ದೇಸಾಯಿ. ಈ ಚಿತ್ರ ಹಲವು ರಾಜ್ಯ ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.