ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ: ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ.

ಬೆಂಗಳೂರು,ನವೆಂಬರ್,23,2021(www.justkannada.in):  ಇಂದು  ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದರು.

ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಭಾರಿ ಮಳೆಯಿಂದಾಗಿ ಕಳೆದ ಐದಾರು ದಿನಗಳಿಂದ ಜಲಾವೃತವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಸಂತ್ರಸ್ತರ ಸಮಸ್ಯೆ ಆಲಿಸಿದರು.

ರಾಜಕಾಲುವೆ ಒತ್ತುವರಿಯಿಂದ ನೀರು ಮನೆಗಳಿಗೆ ನುಗ್ಗಿದೆ. ರಾಜಕಾಲುವೆ ಒತ್ತುವರಿ ಶೀಘ್ರ ತೆರವು ಮಾಡಿಸುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದರು. ಈ ಕುರಿತು ಮಾತನಾಡಿದ ಅವರು, ಈ ಭಾಗದಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆಯಾಗಿದೆ. ರಾಜಕಾಲುವೆ ಅತಿಕ್ರಮಣದಿಂದ ನೀರು ಮನೆಗಳಿಗೆ ನುಗ್ಗಿ ತೊಂದರೆಯಾಗಿದೆ. ಎಲ್ಲಾ 11 ಕೆರೆಗಳ ನೀರು ಯಲಹಂಕ ಕೆರೆಗೆ ಸೇರುತ್ತದೆ. ರಾಜಕಾಲುವೆ ಅತಿಕ್ರಮಣ ನನ್ನ ಗಮನಕ್ಕೆ ಬಂದಿದೆ. ಮಳೆ ನಿಂತ ಬಳಿಕ ರಾಜಕಾಲುವೆ ಅಗಲೀಕರಣಕ್ಕೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

Key words:  Visit – rainy- areas – Bangalore-CM Bommai – listened – problem – victims.