ಸಿದ್ದಗಂಗಾ ಮಠಕ್ಕೆ ಭೇಟಿ: ಮತ್ತೆ ಬಿಜೆಪಿ ನಾಯಕರ ವಿರುದ್ದ ಮಾಜಿ ಸಚಿವ ವಿ.ಸೋಮಣ್ಣ ಅಸಮಾಧಾನ.

ತುಮಕೂರು,ನವೆಂಬರ್,25,2023(www.justkannada.in): ಕಳೆದ ವಿಧಾನಸಭಾ ಚುನಾವಣೆಯಲ್ಲಿ  ವರುಣ ಮತ್ತು ಚಾಮರಾಜನಗರ ಎರಡು ಕಡೆ ನಿಂತು ಸೋಲನ್ನಪ್ಪಿದ ಹಿನ್ನೆಲೆ ಮಾಜಿ ಸಚಿವ ವಿ.ಸೋಮಣ್ಣ ಮತ್ತೆ ಬಿಜೆಪಿ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ವಿ.ಸೋಮಣ್ಣ ಅವರು ಮಠಧ ಸಿದ್ದಲಿಂಗ ಸ್ವಾಮೀಜಿಗಳ ಬಳಿ ತಮ್ಮ ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಗೋವಿಂದರಾಜನಗರ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧ’ ‘ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. 2 ಗಂಟೆ ಮನೆಯಲ್ಲಿ ಕುಳಿತುಕೊಂಡರು.  ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ಮೋದಿ ಅವರು ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಎಂದು ಹೇಳಿದರು. ಹೀಗಾಗಿ ಸ್ಪರ್ಧೆ ಮಾಡಿದೆ ಎಂದು ಸಿದ್ದಲಿಂಗ ಸ್ವಾಮೀಜಿ ಎದುರು ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದರು.

Key words: Visit – Siddaganga Mutt- Former minister -V. Somanna -upset -BJP leaders.