ಸಂಗೊಳ್ಳಿ ರಾಯಣ್ಣನ ಗಲ್ಲಿಗೇರಿಸಿದ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಮೂವರು ಸಚಿವರು…

ಬೆಳಗಾವಿ,ಆಗಸ್ಟ್,29,2020(www.justkannada.in) : ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಗಲ್ಲಿಗೇರಿಸಿದ ಸ್ಥಳಕ್ಕೆ ಮೂವರು ಸಚಿವರು ಭೇಟಿ ನೀಡಿ ಹನುಮಂತನ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

jk-logo-justkannada-logo

ಪೀರನವಾಡಿ ಗಲಭೆ , ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ ಸಂಬಂಧ ನಿನ್ನೆ ಬಾರಿ ಗಲಾಟೆಯಾಗಿ ಲಾಠಿಚಾರ್ಜ್ ನಡೆಸಲಾಗಿತ್ತು. ಈ  ನಡುವೆ ಇಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ‌.ಎಸ್.ಈಶ್ವರಪ್ಪ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌, ಅಬಕಾರಿ ಸಚಿವ ಹೆಚ್.ನಾಗೇಶ್ ಅವರು ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಆಲದ ಮರವಿರುವ ಸ್ಥಳಕ್ಕೆ ಭೇಟಿ ನೀಡಿದರು.

ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳದಲ್ಲಿರುವ ಹನುಮಂತನ ಮೂರ್ತಿಗೆ ಮಾಲಾರ್ಪಣೆ ಮಾಡಿದರು.  ಬಳಿಕ ನಂದಗಡ ಗ್ರಾಮದ ವೃತ್ತದಲ್ಲಿ ರಾಯಣ್ಣ ಪ್ರತಿಮೆಗೆ ಮೂವರು ಸಚಿವರು ಮಾಲಾರ್ಪಣೆ ಮಾಡಿ, ಸಂಗೊಳ್ಳಿ ರಾಯಣ್ಣ ಸಮಾಧಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.

key words ; visiting-three-ministers-site-slaying-Sangolli Rayanna