Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ನನಗೂ ವಿವೇಕಾನಂದ ವರ್ಗಾವಣೆಗೂ ಸಂಬಂಧವಿಲ್ಲ: ಹೆಚ್.ಡಿಕೆ ವಿರುದ್ಧ ಯತೀಂದ್ರ ಸಿದ್ಧರಾಮಯ್ಯ ವಾಗ್ದಾಳಿ.

ನನಗೂ ವಿವೇಕಾನಂದ ವರ್ಗಾವಣೆಗೂ ಸಂಬಂಧವಿಲ್ಲ: ಹೆಚ್.ಡಿಕೆ ವಿರುದ್ಧ ಯತೀಂದ್ರ ಸಿದ್ಧರಾಮಯ್ಯ ವಾಗ್ದಾಳಿ.

ಮೈಸೂರು,ನವೆಂಬರ್,18,2023(www.justkannada.in):  ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಸಿಎಂ  ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ,  ಸಿಎಸ್​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು. ನನಗೂ ವಿವೇಕಾನಂದ ವರ್ಗಾವಣೆಗೂ ಸಂಬಂಧವಿಲ್ಲ. ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ ಎಂದಿದ್ದಾರೆ.

ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ. ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ರಾ? ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದರು.ನನಗೂ ವಿವೇಕಾನಂದ ವರ್ಗಾವಣೆಗೂ ಸಂಬಂಧವಿಲ್ಲ: ಹೆಚ್.ಡಿಕೆ ವಿರುದ್ಧ ಯತೀಂದ್ರ ಸ...

ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ. ಹಲವು ಕೆಲಸ ಮಾಡಿಕೊಡುವಂತೆ ಪಟ್ಟಿ ಕೊಡುತ್ತೇನೆ. ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು. ಲಿಸ್ಟ್ ಎಂದ ಕೂಡಲೇ ವರ್ಗಾವಣೆಗೆ ಅಂತಾ ಯಾಕೆ ಹೇಳುತ್ತೀರಿ? ಇವರ ಅವಧಿಯಲ್ಲಿ ಲಿಸ್ಟ್, ವರ್ಗಾವಣೆ ಅಂದರೆ ದಂಧೆಯಾಗಿತ್ತಾ? ಇವರ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯಲ್ಲಾ ದಂಧೆಯೇ? ಅವರಿಗೆ ಬೇಕಾದ ಅಧಿಕಾರಿಗಳನ್ನ ಹಾಕಿಸಿಲ್ವಾ ..? ಹೆಚ್ಡಿಕೆ ದಂಧೆ ಮಾಡ್ತಿದ್ರು ಅನ್ಸುತ್ತೆ ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ ಎಂದು ಯತೀಂದ್ರ ಸಿದ್ಧರಾಮಯ್ಯ ಕಿಡಿಕಾರಿದರು.

Key words: Vivekananda- transfer-Yathindra Siddaramaiah – against- HDK.