Sunday, September 20, 2026

BDA Apartments

Home Front Page ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ: ಕರೆ ಮಾಡಿ ಕೆ.ಎಸ್ ಈಶ್ವರಪ್ಪ ನಡೆ ಶ್ಲಾಘಿಸಿದ ಪ್ರಧಾನಿ ಮೋದಿ.

ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ: ಕರೆ ಮಾಡಿ ಕೆ.ಎಸ್ ಈಶ್ವರಪ್ಪ ನಡೆ ಶ್ಲಾಘಿಸಿದ ಪ್ರಧಾನಿ ಮೋದಿ.

ಶಿಮಮೊಗ್ಗ,ಏಪ್ರಿಲ್,21,2023(www.justkannada.in):  ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೆ.ಎಸ್ ಈಶ್ವರಪ್ಪ ಅವರ ನಡೆಯನ್ನ  ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು  ಶ್ಲಾಘಿಸಿದ್ದಾರೆ.

ಈ ಸಂಬಂಧ  ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಕೆಎಸ್  ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದ್ದಾರೆ. ಈ ವೇಳೆ ಕೆಎಸ್ ಈಶ್ವರಪ್ಪ ಅವರಿಗೆ ಪಕ್ಷ ಸದಾ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ kse-modi kse modi

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್  ಈಶ್ವರಪ್ಪ, ಮೋದಿ ಬೆಳಗ್ಗೆ  ಕರೆ ಮಾಡಿದಾಗ ನನಗೆ ಅಚ್ಚರಿ ಆಯ್ತು. ಮೋದಿ ಅವರು ಹೀಗೆ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತಿರುವುದು ಸಂತೋಷವಾಗಿದೆ. ಇದು ಎಲ್ಲ ಕಾರ್ಯಕರ್ತ ರಿಗೆ ಸ್ಫೂರ್ತಿಯಾಗಿದೆ ಎಂದು  ಸಂತಸ ವ್ಯಕ್ತಪಡಿಸಿದರು.

Key words: Voluntary- retirement -electoral politics-Modi – praised- KS Eshwarappa