ವೋಟರ್ ಐಡಿ ಅಕ್ರಮ ಪ್ರಕರಣ: ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು.

ನವದೆಹಲಿ,ನವೆಂಬರ್,23,2022(www.justkannada.in):  ಬೆಂಗಳೂರಿನಲ್ಲಿ ವೋಟರ್ ಐಡಿ ಅಕ್ರಮ  ಪ್ರಕರಣಕ್ಕೆ ಸಂಬಂಧಿಸಿದಂತೆ  ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.

ರಾಜ್ಯ ಕಾಂಗ್ರೆಸ್  ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ದೂರು ನೀಡಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಕಚೇರಿಗೆ ಒಂದೇ ಕಾರಲ್ಲಿ ಆಗಮಿಸಿ ದೂರು ಸಲ್ಲಿಸಿದರು.

ಚಿಲುಮೆ ಸಂಸ್ಥೆ ವಿರುದ್ದ ದೂರು ನೀಡಿದ್ದು, ಅಕ್ರಮದಲ್ಲಿ ರಾಜ್ಯ ಸರ್ಕಾರವೇ ನೇರ ಭಾಗಿಯಾಗಿದೆ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Key words:  Voter ID- Illegal Case-Congress -complaint – Central Election Commission.