ವರಣಾ ಕ್ಷೇತ್ರದಲ್ಲೂ ಮತದಾರರ ಪಟ್ಟಿಗೆ ಕನ್ನ ಬೀಳುವ ಸಂಭವ: ಎಚ್ಚರ ವಹಿಸುವಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೂಚನೆ.

ಮೈಸೂರು,ಡಿಸೆಂಬರ್,2,2022(www.justkannada.in): ಈಗಾಗಲೇ ಚುನಾವಣೆಗೆ ಮೂರು ಪಕ್ಷಗಳಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ವರುಣ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಶೀಲನೆ ನೆಪದಲ್ಲಿ ವರುಣ ಕ್ಷೇತ್ರಕ್ಕೂ ಕನ್ನ ಬೀಳುವ ಸಂಭವ ಇದೆ ಎಂದು ವರುಣ ಕ್ಷೇತ್ರದ ಶಾಸಕ  ಯತಿಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಠದ ಅಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.

ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಲಾಕ್ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟರು ಪದಾಧಿಕಾರಿಗಳ ಸಭೆಯನ್ನು ನಂಜನಗೂಡಿನ ಮಾದೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು.  ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಈಗಾಗಲೇ ಚುನಾವಣೆ ಹತ್ತಿರವಾಗುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದರಿಂದ ಎಲ್ಲೆಲ್ಲಿ ಕಾಂಗ್ರೆಸ್ ಪಕ್ಷದ ಮತದಾರರ ಸಂಖ್ಯೆ ಹೆಚ್ಚಿದೆಯೋ ಅಂತಹ ಕಡೆಗಳಲ್ಲಿ ಬಿಜೆಪಿ ಪಕ್ಷದವರು ಸೋಲಿನ ಭೀತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ನೆಪದಲ್ಲಿ ಇರುವಂತ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮತದಾರ ಪಟ್ಟಿ ತಯಾರು ಮಾಡಲು ನೋಡುತ್ತಿದ್ದಾರೆ.  ಆದ್ದರಿಂದ ಕಾಂಗ್ರೆಸ್ ಪಕ್ಷದ ಬೂತ್ ಮಠದ ಪ್ರತಿಯೊಬ್ಬ ಪದಾಧಿಕಾರಿಗಳು ಹಾಗೂ ಏಜೆಂಟರು ಪ್ರತಿ ಮನೆಮನೆಗೆ ಹೋಗಿ ನಿಮಗೆ ವೋಟ್ ಐಡಿ ಇದೆಯಾ ಅಥವಾ ಇಲ್ಲವಾ ಹೊಸದಾಗಿ ಸೇರ್ಪಡೆ ಮಾಡಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಹೊಸದಾಗಿ ಸೇರ್ಪಡೆಯಾಗುವವರನ್ನು ಮತದಾರರ ಪಟ್ಟಿಗೆ ಸೇರಿಸಲು ಸಹಕರಿಸಬೇಕು.  ಮೃತಪಟ್ಟವರ ಹೆಸರನ್ನು ಹಾಗೂ ಒಂದೇ ಮತಗಟ್ಟೆಯಲ್ಲಿ ಡಬಲ್ ಮತದಾರರು ಇದ್ದರೆ ಅಂತವರನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕ್ರಮ ವಹಿಸಬೇಕು ಎಂದು ಬೂತ್ ಮಠದ ಏಜೆಂಟರು ಹಾಗೂ ಪದಾಧಿಕಾರಿಗಳಿಗೆ ಹಾಗೂ ಮುಖಂಡರುಗಳಿಗೆ ಸೂಚನೆ ನೀಡಿದರು.

ಈಗಾಗಲೇ ಈ ವಿಚಾರವಾಗಿ ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದ ಹಗರಣವೇ ನಡೆದಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಲವರನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.  ಆದರೂ ನಾವು ಸುಮ್ಮನೆ ಮನೆಯಲ್ಲಿ ಕೂರುವುದು ಬೇಡ, ಎಚ್ಚರ ವಹಿಸಿ ಎಲ್ಲ ಮತದಾರರಿಗೂ ಮತದಾನ ಹಕ್ಕು ದೊರಕುವಂತೆ ಮಾಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂ ರಾಮಯ್ಯ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಕಲ್ಮಳ್ಳಿ ಸುರೇಶ್ ಬಾಬು, ಸಿಎಂ ಶಂಕರ್, ಆರ್ ಮಹದೇವ್ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಬೂತ್ ಮಟ್ಟದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Key words:  voter- list – hack – Varana constituency -MLA -Yathindra Siddaramaiah -advised