ರಾಷ್ಟ್ರೀಯ ಹೆದ್ಧಾರಿಯಲ್ಲಿ ನೀರು ಹರಿಯುತ್ತಿರುವ ಹಿನ್ನೆಲೆ: ಕರ್ನಾಟಕ- ಕೇರಳ ರಸ್ತೆ ಸಂಚಾರ ಸಂಪೂರ್ಣ ಬಂದ್…

ಚಾಮರಾಜನಗರ, ಆ,8,2020(www.justkannada.in): ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನೀರು ಹರಿಯುತ್ತಿದ್ದು ಈ ಹಿನ್ನೆಲೆ ಕರ್ನಾಟಕ –ಕೇರಳ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.jk-logo-justkannada-logo

ಕೇರಳದ ವೈನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಾರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲೆಹೊಳೆ ಹಳ್ಳ ಉಕ್ಕಿ ಹರಿಯುತ್ತಿದೆ.  ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ತಾತ್ಕಾಲಿಕವಾಗಿ ಕರ್ನಾಟಕ-ಕೇರಳ ಸಂಚಾರವನ್ನು ಬಂದ್ ಮಾಡಿದ್ದಾರೆ.water-flowing-national-highway-karnataka-kerala-road-bandh

ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮೂಲೆಹೊಳೆಯು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ 24 ಗಂಟೆಗಳಿಂದ ಕರ್ನಾಟಕ-ಕೇರಳ ನಡುವಿನ ಸಂಚಾರ ಸ್ಥಗಿತಗೊಳಿಸಲಾಗಿದೆ.  ಈ ಕಾರಣ ನಿನ್ನೆ ಕೇರಳ ಕರ್ನಾಟಕ ಸಂಚರಿಸುವ ಸರಕು ಸಾಗಣೆ ಮಾಡುವ ವಾಹನಗಳು ಮದ್ದೂರು ಚೆಕ್ ಪೋಸ್ಟ್ ನಲ್ಲೇ ಸಾಲುಗಟ್ಟಿ ನಿಂತಿದ್ದವು.

Key words: Water- flowing – national highway-Karnataka- Kerala -Road -bandh