Monday, October 5, 2026

BDA Apartments

Home Front Page ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ ಮುಳುಗಡೆ.

ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ ಮುಳುಗಡೆ.

ಮೈಸೂರು,ಆಗಸ್ಟ್,9,2022(www.justkannada.in): ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಮಧ್ಯೆ ಕಬಿನಿ ಜಲಾಶಯದಿಂದ ನದಿಗೆ ಅಪಾರಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.

ಕಪಿಲಾ ನದಿಗೆ ನೀರು ಹರಿದು ಬರುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ನೀರು ಬಿಡುಗಡೆ ಮಾಡಿದ ಹಿನ್ನೆಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟ ಮುಳುಗಡೆಯಾಗಿದೆ.ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಶ್ರೀಕಂಠೇಶ್ವರ ದೇಗುಲದ ಸ್...

ನದಿ ಮಧ್ಯದಲ್ಲಿರುವ ಕಾಲು ಮಂಟಪವೂ ಮುಳುಗಡೆಯಾಗಿದ್ದು ಪರಶುರಾಮ ದೇಗುಲವನ್ನು ನದಿಯ ನೀರು ಆವರಿಸಿದೆ. ಪ್ರವಾಹ ಭೀತಿ ಹಿನ್ನೆಲೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ.

Key words: water -Kabini –reservoir- Srikantheshwara temple