ಮೈಸೂರು,ಮೇ,28,2025 (www.justkannada.in): ಕೇರಳದ ವೈನಾಡಿನಲ್ಲಿ ಮಳೆರಾಯ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲಿರುವ ಕಬಿನಿ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು ಒಂದೇ ದಿನದಲ್ಲಿ ನಾಲ್ಕು ಅಡಿ ನೀರು ಹೆಚ್ಚಳವಾಗಿದೆ.
ಕಬಿನಿ ಜಲಾಶಯಕ್ಕೆ 23,500 ಸಾವಿರ ಕ್ಯೂಸೆಕ್ ಒಳ ಹರಿವು ಇದ್ದು ನೆನ್ನೆ ನೀರಿನ ಮಟ್ಟ 67.50 ಅಡಿಯಿತ್ತು. ಇದೀಗ ಇಂದು 72.80 ಅಡಿಗೆ ನೀರಿನ ಮಟ್ಟ ಏರಿಕೆಯಾಗಿದೆ. 84 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ19.52 ಟಿಎಂಸಿ ನೀರನ್ನ ಸಂಗ್ರಹಿಸುವ ಸಾಮರ್ಥ್ಯವಿದ್ದು ಸದ್ಯ 71.80ಅಡಿ ನೀರಿದ್ದು 12.61 ಟಿಎಂಸಿ ನೀರು ಸಂಗ್ರಹವಾಗಿದೆ.
ಜಲಾಶಯಕ್ಕೆ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಒಂದೇ ದಿನದಲ್ಲಿ 2.5 ಟಿಎಂಸಿ ನೀರು ಸಂಗ್ರಹವಾಗಿದೆ. ವರ್ಷಕ್ಕೆ ಎರೆಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಇದಾಗಿದ್ದು, ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗೆ ನೀರನ್ನ ಪೂರೈಸುತ್ತದೆ.
Key words: Rain, Water level, Kabini Dam, rises