ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ: ಕಂಪ್ಲಿ ಮತ್ತು ಗಂಗಾವತಿ ನಡುವಿನ ಸಂಚಾರ  ಬಂದ್…

ಬಳ್ಳಾರಿ,ಆ,11,2019(www.justkannada.in): ತುಂಗಾ ಮತ್ತು ಭದ್ರ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕೋಟೆ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದ್ದು ಸಂಚಾರ ಬಂದ್ ಆಗಿದೆ.

. ತುಂಗಭದ್ರಾ ಜಲಾಶಯದಿಂದ  ಸುಮಾರು 2 ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಬಿಡಲಾಗಿದ್ದು ತುಂಗಭದ್ರಾ ನದಿ ಪಾತ್ರದ ಕೋಟೆ ಪ್ರದೇಶದ ಆಂಜನೇಯ ದೇವಸ್ಥಾನಕ್ಕೆ, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಹಾಗೆಯೇ ನೀರು ಹೆಚ್ಚಾದ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕೋಟೆ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದ್ದು, ಕಂಪ್ಲಿ ಮತ್ತು ಗಂಗಾವತಿ ನಡುವಿನ ಸಂಚಾರ ಸ್ಥಗಿತಗೊಂಡಿದೆ. ನೀರು ಸೇತುವೆ ಮೇಲೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ಸಂಚಾರ ಬಂದ್ ಮಾಡಲಾಗಿತ್ತು. ಪ್ರಯಾಣಿಕರು ಪರದಾಡುತ್ತಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Key words: Water –Release- Tungabhadra –Reservoir-Traffic bandh- Kampli – Gangavathi