Wednesday, July 29, 2026

BDA Apartments

Home Front Page ತಮಿಳುನಾಡಿಗೆ ನೀರು ಬಿಟ್ಟರೇ ಬೀದಿಗಿಳಿದು ಹೋರಾಟ- ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

ತಮಿಳುನಾಡಿಗೆ ನೀರು ಬಿಟ್ಟರೇ ಬೀದಿಗಿಳಿದು ಹೋರಾಟ- ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

ಮಂಡ್ಯ,ಜುಲೈ,29,2026 (www.justkannada.in):  ರಾಜ್ಯದಲ್ಲಿ ಕುಡಿಯುವ ನೀರಿಗೂ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ,  ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು. ನೀರು ಬಿಟ್ಟರೇ ಬೀದಿಗಿಳಿದು ಹೋರಾಟ ಮಾಡುತ್ತೇವೆ. ನಮಗೆ ನೀರು ಇಲ್ಲದಿರುವಾಗ ಹೇಗೆ ಬಿಡಲು ಸಾಧ್ಯ? ಹೀಗಾಗಿ ಯಾವುದೇ ಕಾರಣಕ್ಕೂ ನೀರು ಕೊಡೋಕೆ ಸಾಧ್ಯವಿಲ್ಲ ಎಂದು ತಿಳಿಸಿದರು.

ನಿನ್ನೆ ದೆಹಲಿಯಲ್ಲಿ ನಡೆದ ಸಿಡಬ್ಲ್ಯು ಆರ್ ಸಿ ಸಭೆಯಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ 3500 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಈ ಆದೇಶದ ವಿರುದ್ದ ಕರ್ನಾಟಕದಲ್ಲಿ ಪ್ರತಿಭಟನೆಗಳು ಶುರುವಾಗಿದೆ.

Key words:  water, released, Tamil Nadu, protest, MLA, Darshan Puttannaiah, warns